Sunday, December 21, 2008

ಮಂಕುತಿಮ್ಮನ ಕಗ್ಗ

ದಿವಿಸದಿಂ ದಿವಸಕ್ಕೆ ನಿಮಿಷದಿಂ ನಿಮಿಷಕ್ಕೆ |
ಭವಿಷ್ಯವ ಚಿಂತಿಸದೆ ಬದುಕ ನೂಕುತಿರು ||
ವಿವರಗಳ ಜೋಡಿಸುವ ಯಜಮಾನ ಬೇರಿಹನು|
ಸವೆಸು ನೀ ಜನ್ಮವನು ಮಂಕುತಿಮ್ಮ ||


ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು |
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೇ ||
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ |
ಎಲ್ಲರೊಳಗೊಂದಾಗು ಮಂಕುತಿಮ್ಮ||


ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ |
ಕುದುರೆ ನೀನ್ ಅವನು ಪೀಳ್ದಂತೆ ಪಯಣಿಗರು ||
ಮದುವೆಗೋ ಮಸನಕೋ ಬೇಕೆಂದ ಕಡೆಗೋಡು |
ಪದಕುಸಿಯೆ ನೆಲವಿಹುದು ಮಂಕುತಿಮ್ಮ
||

No comments: